ಎಲ್ಲರಿಗೂ ನಮಸ್ಕಾರ, ಮಹಿಳೆಯರಿಗೆ ಸಿಹಿ ಸುದ್ದಿ. ಗೃಹಲಕ್ಷ್ಮೀ ಯೋಜನೆಯ 3 ಕಂತುಗಳ ಹಣ ಒಟ್ಟಿಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ. ಗೃಹಲಕ್ಷ್ಮೀ ಹಣ (Gruhalakshmi Scheme Amount) ಯಾವಗ ಜಮಾ ಆಗಲಿದೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ಓದಿರಿ.
ಗೃಹಲಕ್ಷ್ಮೀ ಯೋಜನೆಯು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಇದನ್ನು ಮಹಿಳೆಯರಿಗಾಗಿಯೇ ಜಾರಿಗೆ ತರಲಾಗಿದೆ. ಈ ಯೋಜನೆಯ ಮೂಲಕ ಪ್ರತಿ ತಿಂಗಳು ಅರ್ಹ ಮನೆ ಯಜಮಾನಿ ಮಹಿಳೆಯರ ಬ್ಯಾಂಕ್ ಖಾತೆಗೆ ನೇರವಾಗಿ ಹಣವನ್ನು ವರ್ಗಾವಣೆ ಮಾಡುತ್ತಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದು ಇದೀಗ ಎರಡು ವರ್ಷಗಳನ್ನು ಪೂರೈಸುತ್ತಿದೆ. ತನ್ನ ಆಡಳಿತ ಸಾಧನೆಗಳು ಹಾಗೂ ಗ್ಯಾರಂಟಿ ಅನುಷ್ಠಾನಗಳ ಕುರಿತು ರಾಜ್ಯಾದ್ಯಂತ ಹಲವಾರು ಕಾರ್ಯಗಳನ್ನು ಹಮ್ಮಿಕೊಳ್ಳುತ್ತಿದೆ.
ಗೃಹಲಕ್ಷ್ಮೀ ಯೋಜನೆಯನ್ನು ಜಾರಿಯಾದಾಗಿನಿಂದ ಮಹಿಳೆಯರಿಗೆ ಈ ಯೋಜನೆಯಿಂದ ಸಾಕಷ್ಟು ಅನುಕೂಲವಾಗಿದೆ. ಈ ಯೋಜನೆಯ ಹಣವನ್ನು ಕೂಡಿಟ್ಟು ತಮ್ಮ ಅಗತ್ಯದ ವಸ್ತುಗಳನ್ನು ಖರೀದಿಸಿದ್ದಾರೆ. ಹೀಗೆ ಹಲವು ರೀತಿಯಲ್ಲಿ ಈ ಯೋಜನೆಯ ಹಣವು ಉಪಯೋಗವಾಗುತ್ತಿದೆ.
ಗೃಹಲಕ್ಷ್ಮಿ ಯೋಜನೆಯ 3 ತಿಂಗಳ ಬಾಕಿ ಇರುವ 6,000 ರೂ. ಹಣವನ್ನು ಮೇ ತಿಂಗಳಲ್ಲಿ ಬಿಡುಗಡೆ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜನವರಿ, ಫೆಬ್ರವರಿ, ಮಾರ್ಚ್ ತಿಂಗಳ ಹಣ ಬಾಕಿ ಇದ್ದು, ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು. ಹಣಕಾಸು ಇಲಾಖೆಯಿಂದ ಹಣ ಬಿಡುಗಡೆಗೆ ಅನುಮೋದನೆ ಸಿಕ್ಕಿದೆ. ಒಂದು ವಾರ ಒಂದು ತಿಂಗಳ ಹಣ, ಮತ್ತೊಂದು ವಾರ ಇನ್ನೊಂದು ತಿಂಗಳ ಹಣ ಹೀಗೆ ಹಂತ ಹಂತವಾಗಿ ಹಣ ಸಂದಾಯವಾಗಲಿದೆ ಎಂದು ತಿಳಿಸಿದ್ದಾರೆ.