Gruhalakshmi Pending Amount: ಗೃಹಲಕ್ಷ್ಮೀ ಯೋಜನೆಯ ಮೂರು ತಿಂಗಳ 6,000 ರೂ. ಹಣ ಶೀಘ್ರದಲ್ಲೇ ಬಿಡುಗಡೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Gruhalakshmi Pending Amount: ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆಯು ಒಂದಾಗಿದೆ. ಈ ಯೋಜನೆಯ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂ. ಅನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ಸಂದಾಯ ಮಾಡುತ್ತಾರೆ. ಇದರಿಂದ ಸಾಕಷ್ಟು ಮಹಿಳೆಯರಿಗೆ ಅನುಕೂಲವಾಗಿದೆ.

ಗೃಹಲಕ್ಷ್ಮೀ ಯೋಜನೆಯನ್ನು ಮಹಿಳೆಯರ ಸಬಲೀಕರಣಕ್ಕಾಗಿ ಜಾರಿಗೆ ತಂದಿದ್ದಾರೆ. ಕೋಟಿಗೂ ಅಧಿಕ ಮಹಿಳೆಯರು ಈ ಯೋಜನೆಯ ಲಾಭವನ್ನು ಪಡೆದುಕೊಂಡಿದ್ದಾರೆ. ಹಾಗೂ ಪಡೆದುಕೊಳ್ಳುತ್ತಿದ್ದಾರೆ. ಆದರೆ ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮೀ ಯೋಜನೆಯ ಹಣವು ಅರ್ಹ ಫಲಾನುಭವಿಗಳ ಖಾತೆಗೆ ಜಮಾ ಆಗಿಲ್ಲ. ಯಾವಗ ಹಣ ಸಂದಾಯವಾಗಲಿದೆ ಎಂದು ಕಾತುರದಿಂದ ಕಾಯುತ್ತಿದ್ದಾರೆ.

ಗೃಹಲಕ್ಷ್ಮೀ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗುಡ್ ನ್ಯೂಸ್ ನೀಡಿದ್ದು, ಗೃಹಲಕ್ಷ್ಮೀ ಯೋಜನೆಯ ಮೂರು ತಿಂಗಳಿನ 6,000 ರೂ. ಹಣವು ಯಾವಾಗ ಅರ್ಹ ಮಹಿಳೆಯರ ಖಾತೆಗೆ ಸೇರಲಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.

ಉಡುಪಿ ಜಿಲ್ಲಾ ಪಂಚಾಯತ, ಕೃಷಿ ಇಲಾಖೆ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಕುಂದಾಪುರ ರೈತ ಸಂಪರ್ಕ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನವರಿ, ಫೆಬ್ರವರಿ ಹಾಗೂ ಮಾರ್ಚ್ ತಿಂಗಳಿನ ಬಾಕಿ ಉಳಿದಿರುವ ಹಣವನ್ನ ಹಂತ ಹಂತವಾಗಿ ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಬಾಕಿ ಇರುವ ಗೃಹಲಕ್ಷ್ಮೀ ಯೋಜನೆಯ ಮೂರು ತಿಂಗಳ ಹಣವನ್ನು ಮೇ ತಿಂಗಳಲ್ಲಿ ಹಂತ ಹಂತವಾಗಿ ಬಿಡುಗಡೆಯಾಗಲಿದೆ. ಹಣಕಾಸು ಇಲಾಖೆಯಿಂದ ಈಗಾಗಲೇ ಅನುಮೋದನೆ ಲಭಿಸಿದೆ. ಮೊದಲ ಕಂತು ಒಂದು ವಾರದಲ್ಲಿ, ಎರಡನೇ ಕಂತು ಮುಂದಿನ ವಾರದಲ್ಲಿ ಹಾಗೂ ಮೂರನೇ ಕಂತು ತಿಂಗಳ ಅಂತ್ಯದೊಳಗೆ ಫಲಾನುಭವಿಗಳ ಖಾತೆಗೆ ಜಮೆ ವರ್ಗಾವಣೆ ಆಗಲಿದೆ ಎಂದು ತಿಳಿಸಿದ್ದಾರೆ.

ಗೃಹಲಕ್ಷ್ಮೀ ಯೋಜನೆ DBT Status Check ಮಾಡಿ

Leave a Comment