ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ "ಗೃಹ ಲಕ್ಷ್ಮೀ" ಯೋಜನೆಯ ಆನ್‌ಲೈನ್ ಅರ್ಜಿ 

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದಿರುವ "ಗೃಹ ಲಕ್ಷ್ಮೀ" ಯೋಜನೆಯ ಅರ್ಜಿಯನ್ನು ಆನ್‌ಲೈನ್‌ ಮೂಲಕ ಸಲ್ಲಿಸಬಹುದಾಗಿದೆ.  ಇಲ್ಲಿದೆ ಡಿಟೈಲ್‌ ಮಾಹಿತಿ.

ರಾಜ್ಯದ ಮಹಿಳೆಯರ ಸಬಲೀಕರಣಕ್ಕಾಗಿ ಕರ್ನಾಟಕ ರಾಜ್ಯ ಸರ್ಕಾರವು "ಗೃಹ ಲಕ್ಷ್ಮೀ" ಯೋಜನೆಯನ್ನು  ಅನುಷ್ಠಾಣಕ್ಕೆ ತರುತ್ತಿದೆ. 

ಮನೆಯ ನಿರ್ವಹಣೆಗೆ ಅನುಕೂಲವಾಲೆಂದು ಕುಟುಂಬದ ಯಜಮಾನಿಯ ಖಾತೆಗೆ ಪ್ರತಿ ತಿಂಗಳು ರೂ.2,000 ಜಮಾ ಮಾಡಲಾಗುವುದು ಎಂದು ಸರ್ಕಾರ ತಿಳಿಸಿದೆ.

ವಿಧಾನ ಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೇಸ್‌ ಪಕ್ಷವು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಗೃಹ ಲಕ್ಷ್ಮೀ ಯೋಜನೆಯ ಬಗ್ಗೆ  ಘೋಷಿಸಿದ್ದರು 

ಈಗಾಗಲೇ ಶಕ್ತಿ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗಿದೆ. (ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ) ಇದಕ್ಕೆ ಉತ್ತಮ ಸ್ಪಂದನೆ ದೊರೆತಿದೆ. 

ಗೃಹ ಜ್ಯೋತಿ ಯೋಜನೆಯ ಅರ್ಜಿ ಸಲ್ಲಿಕೆ ಪ್ರಕ್ರೀಯೆ ಆರಂಭವಾಗಿದೆ. ಜುಲೈ 1 ರಿಂದ 200 ಯುನಿಟ್‌ ವರೆಗೆ ಗೃಹ ಬಳಕೆಗೆ ಉಚಿತ ವಿದ್ಯುತ್‌ ಸಿಗಲಿದೆ. 

ಅಂತ್ಯೋದಯ, BPL ಮತ್ತು APL ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿ.

ಇದೀಗ ಗೃಹ ಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಕೆ ಪ್ರಕ್ರೀಯೆ ಶುರುವಾಗಲಿದೆ. ಆದ್ದರಿಂದ ಈ ಪೋಸ್ಟನಲ್ಲಿ ನಿಮಗೆ ಎಲ್ಲ ಮಾಹಿತಿಯನ್ನು ನೀಡಲಿದ್ದೇವೆ.  

 ಗೃಹ ಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಕೆ ಪ್ರಕ್ರೀಯೆಯ  ಮಾಹಿತಿಗಾಗಿ ಈ ಕೇಳಗಿನ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ.